ADVERTISEMENT

Covid-19 India Update: 2.40 ಲಕ್ಷ ಹೊಸ ಪ್ರಕರಣ, 3,741 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಮೇ 2021, 4:59 IST
Last Updated 23 ಮೇ 2021, 4:59 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಾದ್ಯಂತ 24 ಗಂಟೆಗಳಲ್ಲಿ 2.40 ಲಕ್ಷ ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 3,741 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,65,30,132ಕ್ಕೆ ಏರಿಕೆಯಾಗಿದೆ. ಆ ಪೈಕಿ 2,99,266 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 2,34,25,467 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 28,05,399 ಸಕ್ರಿಯ ಪ್ರಕರಣಗಳಿವೆ.

ADVERTISEMENT

ದೇಶದಲ್ಲಿ ಈವರೆಗೆ 19,50,04,184 ಡೋಸ್‌ ಕೋವಿಡ್‌ ಲಸಿಕೆಯನ್ನು ವಿತರಿಸಲಾಗಿದೆ.

ಕರ್ನಾಟಕದಲ್ಲಿ 4,83,225 ಮಹಾರಾಷ್ಟ್ರದಲ್ಲಿ 3,54,830, ಕೇರಳದಲ್ಲಿ 2,89,657, ತಮಿಳುನಾಡಿನಲ್ಲಿ 2,84,278,
ಆಂಧ್ರಪ್ರದೇಶದಲ್ಲಿ 2,10,683, ಪಶ್ಚಿಮ ಬಂಗಾಳದಲ್ಲಿ 1,31,688, ರಾಜಸ್ಥಾನದಲ್ಲಿ 1,22,330 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.