ADVERTISEMENT

Covid-19 India Update: 2.61 ಲಕ್ಷ ಹೊಸ ಪ್ರಕರಣ, 1,501 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಏಪ್ರಿಲ್ 2021, 5:03 IST
Last Updated 18 ಏಪ್ರಿಲ್ 2021, 5:03 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ನವದೆಹಲಿ: ದೇಶದಲ್ಲಿ ಸತತ ನಾಲ್ಕನೇ ದಿನವೂ 2 ಲಕ್ಷಕ್ಕಿಂತ ಹೆಚ್ಚು ಕೋವಿಡ್‌–19 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 1,47,88,109 ಕ್ಕೆತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 2,61,500 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇದೇ ವೇಳೆ 1,501 ಸೋಂಕಿತರು ಮೃತಪಟ್ಟಿದ್ದಾರೆ. 1,38,423 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ ಒಟ್ಟು 1,28,09,643 ಸೋಂಕಿತರು ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆ 1,77,150ಕ್ಕೆ ತಲುಪಿದೆ. ಸದ್ಯ ದೇಶದಲ್ಲಿ 18,01,316 ಸಕ್ರಿಯ ಪ್ರಕರಣಗಳಿವೆ.

ADVERTISEMENT

ದೇಶದಲ್ಲಿ ಈವರೆಗೆ ಒಟ್ಟು 12,26,22,590 ಜನರಿಗೆ ಕೋವಿಡ್‌ ಲಸಿಕೆ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.