ADVERTISEMENT

Covid India Update | 2,828 ಹೊಸ ಪ್ರಕರಣ, ಪಾಸಿಟಿವಿಟಿ ದರ ಶೇ 0.60ಕ್ಕೆ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಮೇ 2022, 4:02 IST
Last Updated 29 ಮೇ 2022, 4:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 2,828 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 14 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,31,53,043 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,586 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 4,26,11,370 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 17,087 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ 0.60 ರಷ್ಟಿದೆ.

ADVERTISEMENT

ಕೇರಳದಲ್ಲಿ 5,071, ಮಹಾರಾಷ್ಟ್ರದಲ್ಲಿ 2,772, ಕರ್ನಾಟಕದಲ್ಲಿ 1,898, ದೆಹಲಿಯಲ್ಲಿ 1,641, ಹರಿಯಾಣದಲ್ಲಿ 1,166, ಉತ್ತರ ಪ್ರದೇಶದಲ್ಲಿ 831 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಒಟ್ಟು 193.28 ಕೋಟಿ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.