ADVERTISEMENT

Covid-19 India Update: 28,591 ಹೊಸ ಪ್ರಕರಣ ದೃಢ, 338 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಸೆಪ್ಟೆಂಬರ್ 2021, 4:35 IST
Last Updated 12 ಸೆಪ್ಟೆಂಬರ್ 2021, 4:35 IST
ಗುಜರಾತಿನ ಅಹಮದಾಬಾದ್‌ನಲ್ಲಿ ಆರೋಗ್ಯ ಸಿಬ್ಬಂದಿ ವಾಹನ ಸವಾರರಿಗೆ ಕೋವಿಡ್‌ ಲಸಿಕೆ ನೀಡಿದರು. –ಪಿಟಿಐ ಚಿತ್ರ
ಗುಜರಾತಿನ ಅಹಮದಾಬಾದ್‌ನಲ್ಲಿ ಆರೋಗ್ಯ ಸಿಬ್ಬಂದಿ ವಾಹನ ಸವಾರರಿಗೆ ಕೋವಿಡ್‌ ಲಸಿಕೆ ನೀಡಿದರು. –ಪಿಟಿಐ ಚಿತ್ರ   

ನವದೆಹಲಿ: ದೇಶದಾದ್ಯಂತ 24 ಗಂಟೆಗಳಲ್ಲಿ 28,591 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 338 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,32,36,921 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,42,655 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 3,24,09,345 ಮಂದಿ ಗುಣಮುಖರಾಗಿದ್ದು, ಸದ್ಯ ದೇಶದಲ್ಲಿ 3,84,921 ಸಕ್ರಿಯ ಪ್ರಕರಣಗಳಿವೆ.

ಕೇರಳದಲ್ಲಿ 2,32,352, ಮಹಾರಾಷ್ಟ್ರದಲ್ಲಿ 51,285, ಕರ್ನಾಟಕದಲ್ಲಿ 16,699, ತಮಿಳುನಾಡಿನಲ್ಲಿ 16,399,
ಆಂಧ್ರಪ್ರದೇಶದಲ್ಲಿ 15,157 ಸಕ್ರಿಯ ಪ್ರಕರಣಗಳಿವೆ.

ADVERTISEMENT

ದೇಶದಲ್ಲಿ ಈವರೆಗೆ 73,82,07,378 ಡೋಸ್‌ ಕೋವಿಡ್‌ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.