ADVERTISEMENT

India Covid Update: ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ 3 ಲಕ್ಷಕ್ಕೆ ಇಳಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಜನವರಿ 2022, 19:46 IST
Last Updated 24 ಜನವರಿ 2022, 19:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ ಮೂರು ಲಕ್ಷಕ್ಕೆ ಇಳಿಕೆಯಾಗಿದ್ದು, ಕೊಂಚ ನಿರಾಳತೆ ಮೂಡಿಸಿದೆ.

ಸೋಮವಾರ ಬೆಳಿಗ್ಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ ಹೊಸದಾಗಿ 3,06,064 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಈ ಮೂಲಕ ಕಳೆದೆರಡು ದಿನಗಳಿಂದ ಕೊರೊನಾ ಸೋಂಕು ಪ್ರಕರಣಗಳಲ್ಲಿ ಇಳಿಮುಖವಾಗಿವೆ. ದೇಶದಲ್ಲಿ ಶನಿವಾರದಂದು 3.37 ಲಕ್ಷ ಹಾಗೂ ಭಾನುವಾರ 3.33 ಲಕ್ಷ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು.

ಅಲ್ಲದೆ ನಿನ್ನೆಗಿಂತ27,469ರಷ್ಟು ಕೋವಿಡ್ ಪ್ರಕರಣಗಳು ಕಡಿಮೆ ದಾಖಲಾಗಿವೆ.

ಇದೇ ಅವಧಿಯಲ್ಲಿ 439 ಮಂದಿ ಮೃತಪಟ್ಟಿದ್ದಾರೆ. ಸೋಂಕಿನಿಂದಾಗಿ ಇದುವರೆಗೆ ಒಟ್ಟು 4,89,848 ಮಂದಿ ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,49,335ಕ್ಕೆ ತಲುಪಿದೆ. 2,43,495 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೈನಂದಿನ ಕೋವಿಡ್ ದೃಢ ಪ್ರಮಾಣವು ಶೇ 20.75 ಆಗಿದೆ.

ದೇಶದಲ್ಲಿ ಇದುವರೆಗೆ 162.26 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ಗಣರಾಜ್ಯೋತ್ಸವ: 15 ವರ್ಷಕ್ಕಿಂತ ಕೆಳಗಿನವರಿಗೆ ಅವಕಾಶ ಇಲ್ಲ

ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು 15 ವರ್ಷಕ್ಕಿಂತ ಕಡಿಮೆ
ವಯಸ್ಸಿನ ಮಕ್ಕಳಿಗೆ ಅವಕಾಶ ಇಲ್ಲ. ಅಲ್ಲದೆ ಎರಡು ಡೋಸ್‌ ಲಸಿಕೆ ಪಡೆದವರಿಗಷ್ಟೇಅವಕಾಶ ನೀಡಲಾಗುತ್ತದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಮಾಸ್ಕ್‌ ಧರಿಸುವುದು, ದೈಹಿಕ ಅಂತರ ಕಾಪಾಡುವುದು ಸೇರಿದಂತೆ ಕೋವಿಡ್‌ ನಿಯಂತ್ರಣಕ್ಕೆ ರೂಪಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.