ADVERTISEMENT

Covid India Update| ಇಂದು 3,303 ಪ್ರಕರಣಗಳು ಪತ್ತೆ: 39 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಏಪ್ರಿಲ್ 2022, 4:08 IST
Last Updated 28 ಏಪ್ರಿಲ್ 2022, 4:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಬೆಂಗಳೂರು: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,303 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 2,563 ಸೋಂಕಿತರು ಚೇತರಿಕೆ ಕಂಡಿದ್ದಾರೆ.

ಸದ್ಯ ದೇಶದಲ್ಲಿ 16,980 ಸಕ್ರಿಯ ಸೋಂಕು ಪ್ರಕರಣಗಳಿವೆ. ದೇಶದ ದೈನಂದಿನ ಪಾಸಿಟಿವಿಟಿ ದರ ಶೇ‌ 0.66ಗೆ ತಲುಪಿದೆ.

ಇನ್ನು, ಒಂದು ದಿನದ ಈ ಅವಧಿಯಲ್ಲಿ 39 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. ಇದರೊಂದಿಗೆ ಕೊರೊನಾ ವೈರಸ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 5,23,693ಕ್ಕೆ ಏರಿಕೆಯಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.