ADVERTISEMENT

India Covid Update: ದೇಶದಲ್ಲಿ ಕೋವಿಡ್ ಪ್ರಕರಣ ಅಲ್ಪ ಇಳಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜನವರಿ 2022, 5:43 IST
Last Updated 23 ಜನವರಿ 2022, 5:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಶನಿವಾರಕ್ಕೆ ಹೋಲಿಸಿದರೆ ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ. ಭಾನುವಾರ ಬೆಳಿಗ್ಗೆ ಕೊನೆಗೊಂಡಂತೆ ಕಳೆದ 24 ತಾಸಿನಲ್ಲಿ ದೇಶದಲ್ಲಿ ಹೊಸದಾಗಿ 3,33,533 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ತಿಳಿಸಿದೆ.

ಈ ಮೂಲಕ ಕಳೆದ ದಿನಕ್ಕಿಂತ 4,171ರಷ್ಟು ಕೋವಿಡ್ ಪ್ರಕರಣಗಳು ಕಡಿಮೆ ದಾಖಲಾಗಿವೆ. ಶನಿವಾರದಂದು 3.37 ಲಕ್ಷ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು.

ಇದೇ ಅವಧಿಯಲ್ಲಿ 525 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,87,205ಕ್ಕೆ ತಲುಪಿದೆ. ದೈನಂದಿನ ಕೋವಿಡ್ ದೃಢ ಪ್ರಮಾಣ ದರವು ಶೇ 17.78 ಆಗಿದೆ.

ಒಟ್ಟು ಸೋಂಕಿತರ ಸಂಖ್ಯೆ 3,92,37,264 ಆಗಿದ್ದು, ಈ ವರೆಗೆ 4,89,409 ಮಂದಿ ಕೊರೊನಾ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ.

ಕಳೆದ 24 ಗಂಟೆಯ ಅವಧಿಯಲ್ಲಿ 2,59,167 ಮಂದಿ ಗುಣಮುಖರಾಗಿದ್ದು, ಒಟ್ಟು 3,65,60,650 ಮಂದಿ ಸೋಂಕಿನಿಂದಚೇತರಿಸಿಕೊಂಡಿದ್ದಾರೆ.

ದೇಶದಲ್ಲಿ ಇದುವರೆಗೆ 161.92 ಕೋಟಿ ಕೋವಿಡ್ ಡೋಸ್ ಲಸಿಕೆಯನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.