ADVERTISEMENT

Covid-19 India Update: ದೇಶದಲ್ಲಿ 37 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳು

ಏಜೆನ್ಸೀಸ್
Published 14 ಮೇ 2021, 4:22 IST
Last Updated 14 ಮೇ 2021, 4:22 IST
ಕೊರೊನಾ ವೈರಸ್ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ   

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 3,43,144 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 4,000 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಅಪ್‌ಡೇಟ್‌ನಿಂದ ತಿಳಿದು ಬಂದಿದೆ.

ದೇಶದಲ್ಲಿ ಪ್ರಸ್ತುತ 37,04,893 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 2,40,46,809ಕ್ಕೆ ಏರಿಕೆಯಾಗಿದ್ದು, 2,00,79,599 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಕೋವಿಡ್‌ ಕಾರಣಗಳಿಂದಾಗಿ 2,62,317 ಮಂದಿ ಸಾವಿಗೀಡಾಗಿದ್ದಾರೆ.

ದೇಶದಾದ್ಯಂತ 17,92,98,584 ಡೋಸ್‌ಗಳಷ್ಟು ಲಸಿಕೆ ಹಾಕಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.