ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 3,46,786 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 2,620 ಜನ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಲಾಗಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ.
ದೇಶದಲ್ಲಿ ಈಗ ಒಟ್ಟು ಪ್ರಕರಣಗಳ ಸಂಖ್ಯೆ ಒಟ್ಟು ಪ್ರಕರಣಗಳ ಸಂಖ್ಯೆ 1,66,10,481ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 2,19,838 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 1,38,67,997ರಷ್ಟಾಗಿದೆ. ಕೋವಿಡ್‌ನಿಂದ ಮೃತರ ಸಂಖ್ಯೆ ಒಟ್ಟು 1,89,544 ರಷ್ಟಾಗಿದೆ. ದೇಶದಲ್ಲಿ ಈಗ 25,52,940 ಸಕ್ರಿಯ ಪ್ರಕರಣಗಳಿವೆ.
13,83,79,832 ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ
ಗಂಭೀರ ಪರಿಸ್ಥಿತಿಯಲ್ಲಿ ದೇಶದ ರಾಜಧಾನಿ: ದೆಹಲಿಯಲ್ಲಿ ಕೊರೊನಾ ಸಾವಿನ ಸಂಖ್ಯೆ ದಿನೇದಿನೇ ಹೆಚ್ಚುತ್ತಲೇ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 348 ಜನ ಸಾವಿಗೀಡಾಗಿದ್ದಾರೆ. ಈ ಪೈಕಿ ಕೆಲವರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗಳಲ್ಲಿನ ಆಮ್ಲಜನಕದ ಪೂರೈಕೆಯ ಅಭಾವದಿಂದ ಅಸುನೀಗಿದ್ದಾರೆ.
ಶುಕ್ರವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳಲ್ಲಿ ದೆಹಲಿಯ ವಿವಿಧೆಡೆ ಪರೀಕ್ಷೆಗೆ ಒಳಗಾದ 75,037 ಜನರ ಪೈಕಿ (ಶೇ 32.43ರಷ್ಟು) ಹೊಸದಾಗಿ 24,331 ಜನಕ್ಕೆ ಕೊರೊನಾ ಸೋಂಕು ತಗುಲಿದೆ. ಇದೇ ವೇಳೆ, 23,572 ಜನ ಗುಣಮುಖರಾಗಿ ಮನೆಗೆ ಮರಳಿದ್ದು, ನಗರದಾದ್ಯಂತ 92,029 ಸಕ್ರಿಯ ಪ್ರಕರಣಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.