ADVERTISEMENT

India Covid Updates: ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಸೆಪ್ಟೆಂಬರ್ 2022, 4:23 IST
Last Updated 28 ಸೆಪ್ಟೆಂಬರ್ 2022, 4:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,615 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,45,75,473ಕ್ಕೆ ಏರಿಕೆಯಾಗಿದೆ. ಆ ಪೈಕಿ 5,28,562 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 4,40,04,553 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 40,979 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಕೇರಳದಲ್ಲಿ 12,846, ತಮಿಳುನಾಡಿನಲ್ಲಿ 5,437, ಮಹಾರಾಷ್ಟ್ರದಲ್ಲಿ 3,641, ಪಶ್ಚಿಮ ಬಂಗಾಳದಲ್ಲಿ 3,045, ಕರ್ನಾಟಕದಲ್ಲಿ 3,012 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಪಾಸಿಟಿವಿಟಿ ದರ ಶೇ 1.12 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.