ADVERTISEMENT

Covid-19 India Update: 36,401 ಹೊಸ ಪ್ರಕರಣ, 530 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಆಗಸ್ಟ್ 2021, 4:31 IST
Last Updated 19 ಆಗಸ್ಟ್ 2021, 4:31 IST
ಮುಂಬೈನಲ್ಲಿ ಕೋವಿಡ್‌ ಲಸಿಕೆ ಪಡೆಯಲು ಸಾಲುಗಟ್ಟಿ ನಿಂತಿರುವ ಜನ –ಪಿಟಿಐ ಚಿತ್ರ
ಮುಂಬೈನಲ್ಲಿ ಕೋವಿಡ್‌ ಲಸಿಕೆ ಪಡೆಯಲು ಸಾಲುಗಟ್ಟಿ ನಿಂತಿರುವ ಜನ –ಪಿಟಿಐ ಚಿತ್ರ   

ನವದೆಹಲಿ: ದೇಶದಾದ್ಯಂತ ಗುರುವಾರ 24 ಗಂಟೆಗಳ ಅವಧಿಯಲ್ಲಿ 36,401 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 530 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 3,23,22,258ಕ್ಕೆ ಏರಿಕೆಯಾಗಿದೆ. ಆ ಪೈಕಿ 4,33,049 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 3,15,25,080 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 3,64,129 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಕೇರಳದಲ್ಲಿ 1,78,212, ಮಹಾರಾಷ್ಟ್ರದಲ್ಲಿ 61,568, ಕರ್ನಾಟಕದಲ್ಲಿ 21,292, ತಮಿಳುನಾಡಿನಲ್ಲಿ 20,083, ಆಂಧ್ರಪ್ರದೇಶ 15,944 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಈವರೆಗೆ 56,64,88,433 ಡೋಸ್ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.