ADVERTISEMENT

Covid-19 India Update: 37,593 ಹೊಸ ಪ್ರಕರಣ, 648 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಆಗಸ್ಟ್ 2021, 4:28 IST
Last Updated 25 ಆಗಸ್ಟ್ 2021, 4:28 IST
ಬೆಂಗಳೂರು ನಗರದ ದಾಸಪ್ಪ ಆಸ್ಪತ್ರೆಯಲ್ಲಿ ಸಾರ್ವಜನಿಕರು ಕೋವಿಡ್ ಲಸಿಕೆ ಹಾಕಿಸಿಕೊಂಡರು. –ಪ್ರಜಾವಾಣಿ ಚಿತ್ರ
ಬೆಂಗಳೂರು ನಗರದ ದಾಸಪ್ಪ ಆಸ್ಪತ್ರೆಯಲ್ಲಿ ಸಾರ್ವಜನಿಕರು ಕೋವಿಡ್ ಲಸಿಕೆ ಹಾಕಿಸಿಕೊಂಡರು. –ಪ್ರಜಾವಾಣಿ ಚಿತ್ರ   

ನವದೆಹಲಿ: ದೇಶದಾದ್ಯಂತ 24 ಗಂಟೆಗಳಲ್ಲಿ 37,593 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 648 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 3,25,12,366 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,35,758 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 3,17,54,281 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 3,22,327 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಕೇರಳದಲ್ಲಿ 1,59,870, ಮಹಾರಾಷ್ಟ್ರದಲ್ಲಿ 53,260, ಕರ್ನಾಟಕದಲ್ಲಿ 19,810, ತಮಿಳುನಾಡಿನಲ್ಲಿ 18,603, ಆಂಧ್ರಪ್ರದೇಶದಲ್ಲಿ 13,677 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಈವರೆಗೆ 59,55,04,593 ಡೋಸ್‌ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.