ADVERTISEMENT

India Covid Updates: 3 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 13 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಅಕ್ಟೋಬರ್ 2022, 4:01 IST
Last Updated 1 ಅಕ್ಟೋಬರ್ 2022, 4:01 IST
ಕೋವಿಡ್ ಪತ್ತೆ ಪರೀಕ್ಷೆ
ಕೋವಿಡ್ ಪತ್ತೆ ಪರೀಕ್ಷೆ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,805 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 13 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,45,91,112 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,28,655 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 4,40,24,164 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 38,293 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಕೇರಳದಲ್ಲಿ 10,605, ತಮಿಳುನಾಡಿನಲ್ಲಿ 5,496, ಮಹಾರಾಷ್ಟ್ರದಲ್ಲಿ 3,192, ಪಶ್ಚಿಮ ಬಂಗಾಳದಲ್ಲಿ 3,169, ಕರ್ನಾಟಕದಲ್ಲಿ 2,821 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಪಾಸಿಟಿವಿಟಿ ದರ ಶೇ 1.29 ರಷ್ಟಿದೆ.

ದೇಶದಲ್ಲಿ ಇದುವರೆಗೆ 218.68 ಕೋಟಿ ಡೋಸ್‌ಕೋವಿಡ್‌ ಲಸಿಕೆ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.