ADVERTISEMENT

Covid-19 India Update: ದೇಶದಲ್ಲಿ 39,796 ಹೊಸ ಪ್ರಕರಣಗಳು, 723 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜುಲೈ 2021, 5:03 IST
Last Updated 5 ಜುಲೈ 2021, 5:03 IST
ನವದೆಹಲಿಯ ಕೋವಿಡ್‌–19 ಆರೈಕೆ ಕೇಂದ್ರದಲ್ಲಿ ಆರೋಗ್ಯ ಕಾರ್ಯಕರ್ತರೊಬ್ಬರು ಕೊರೊನಾ ವೈರಸ್‌ ಸೋಂಕಿತ ವ್ಯಕ್ತಿಯೊಂದಿಗೆ ಮಾತನಾಡುತ್ತಿರುವುದು–ಸಾಂದರ್ಭಿಕ ಚಿತ್ರ
ನವದೆಹಲಿಯ ಕೋವಿಡ್‌–19 ಆರೈಕೆ ಕೇಂದ್ರದಲ್ಲಿ ಆರೋಗ್ಯ ಕಾರ್ಯಕರ್ತರೊಬ್ಬರು ಕೊರೊನಾ ವೈರಸ್‌ ಸೋಂಕಿತ ವ್ಯಕ್ತಿಯೊಂದಿಗೆ ಮಾತನಾಡುತ್ತಿರುವುದು–ಸಾಂದರ್ಭಿಕ ಚಿತ್ರ   

ನವದೆಹಲಿ: ಭಾರತದಲ್ಲಿ ಸೋಮವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 39,796 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 723 ಮಂದಿ ಸಾವಿಗೀಡಾಗಿದ್ದಾರೆ ಮತ್ತು 42,352 ಮಂದಿ ಗುಣಮುಖರಾಗಿದ್ದಾರೆ.

ಪ್ರಸ್ತುತ ದೇಶದಲ್ಲಿ ಒಟ್ಟು ಪ್ರಕರಣಗಳ ಶೇ.1.59ರಷ್ಟು, 4,82,071 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು 3,05,85,229 ಕೋವಿಡ್‌ ಪ್ರಕರಣಗಳ ಪೈಕಿ 2,97,00,430 ಜನರು ಚೇತರಿಸಿಕೊಂಡಿದ್ದು, 4,02,728 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಅಪ್‌ಡೇಟ್‌ನಿಂದ ತಿಳಿದು ಬಂದಿದೆ.

ಭಾನುವಾರ ದಾಖಲಾದ ಪ್ರಕರಣಗಳಿಗಿಂತ 3,275 ಕಡಿಮೆ ಪ್ರಕರಣಗಳು ಸೋಮವಾರ 24 ಗಂಟೆಗಳಲ್ಲಿ ವರದಿಯಾಗಿದೆ.

ADVERTISEMENT

ದೇಶದಾದ್ಯಂತ 35,28,92,046 ಡೋಸ್‌ಗಳಷ್ಟು ಕೋವಿಡ್‌–19 ಲಸಿಕೆ ಹಾಕಲಾಗಿದೆ. ಐಸಿಎಂಆರ್‌ ಪ್ರಕಾರ, ಕಳೆದ 24 ಗಂಟೆಗಳಲ್ಲಿ 15,22,504 ಗಂಟಲು ದ್ರವ ಮಾದರಿಗಳಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.