ADVERTISEMENT

Covid-19 India Update: 41,806 ಹೊಸ ಪ್ರಕರಣ; 581 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಜುಲೈ 2021, 5:36 IST
Last Updated 15 ಜುಲೈ 2021, 5:36 IST
   

ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ 41,806 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 581 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಈ ಮೂಲಕ ದೇಶದಲ್ಲಿ ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 3,09,87,880ಕ್ಕೆ ಏರಿದ್ದು, 3,01,43,850 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟವರ ಒಟ್ಟು ಸಂಖ್ಯೆ 4,11,989ಕ್ಕೆ ಜಿಗಿದಿದೆ.

ದೇಶದಲ್ಲಿ ಈಗ 4,32,041 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ADVERTISEMENT

ಇದೇವೇಳೆ, ದೇಶದಲ್ಲಿ 39 ಕೋಟಿ(39,10,53,156)ಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ. 24 ಗಂಟೆಗಳಲ್ಲಿ 32.10 ಲಕ್ಷ (32,10,451) ಡೋಸ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.