ADVERTISEMENT

Covid India Update: 91 ದಿನಗಳಲ್ಲೇ ಅತಿ ಕಡಿಮೆ ಪ್ರಕರಣ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಜೂನ್ 2021, 4:43 IST
Last Updated 22 ಜೂನ್ 2021, 4:43 IST
ಪಶ್ಚಿಮ ಬಂಗಾಳದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ದೋಣಿಯಲ್ಲಿ ಹಳ್ಳಿಗಳಿಗೆ ಕೋವಿಡ್‌ ಲಸಿಕೆ ಮತ್ತು ವೈದ್ಯಕೀಯ ಪರಿಕರಗಳನ್ನು ತೆಗೆದುಕೊಂಡು ಹೋದರು. –ರಾಯಿಟರ್ಸ್ ಚಿತ್ರ
ಪಶ್ಚಿಮ ಬಂಗಾಳದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ದೋಣಿಯಲ್ಲಿ ಹಳ್ಳಿಗಳಿಗೆ ಕೋವಿಡ್‌ ಲಸಿಕೆ ಮತ್ತು ವೈದ್ಯಕೀಯ ಪರಿಕರಗಳನ್ನು ತೆಗೆದುಕೊಂಡು ಹೋದರು. –ರಾಯಿಟರ್ಸ್ ಚಿತ್ರ    

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 42,640 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 1,167 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದಿನದಿಂದ ದಿನಕ್ಕೆ ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ದೇಶದಲ್ಲಿ ಕಳೆದ 91 ದಿನಗಳಲ್ಲೇ ಕಡಿಮೆ ಪ್ರಕರಣಗಳು ದಾಖಲಾಗಿವೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,99,77,861 ಕ್ಕೆ ಏರಿಕೆಯಾಗಿದೆ. ಆ ಪೈಕಿ 3,89,302 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ADVERTISEMENT

ಈವರೆಗೆ 2,89,26,038 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 6,62,521 ಸಕ್ರಿಯ ಪ್ರಕರಣಗಳಿವೆ.

ಇದುವರೆಗೆ ದೇಶದಾದ್ಯಂತ 28,87,66,201 ಡೋಸ್‌ ಕೋವಿಡ್‌ ಲಸಿಕೆಯನ್ನು ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.