ಮುಂಬೈ: ಭಾರತದಲ್ಲಿ ಗುರುವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್–19 ದೃಢಪಟ್ಟ 42,982 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಕೋವಿಡ್ ಕಾರಣಗಳಿಂದಾಗಿ 533 ಮಂದಿ ಸಾವಿಗೀಡಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದು ಬಂದಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ. ಬುಧವಾರ 42,625 ಹೊಸ ಪ್ರಕರಣಗಳು ವರದಿಯಾಗಿತ್ತು. ಪ್ರಸ್ತುತ ದೇಶದಲ್ಲಿ 4,11,076 ಪ್ರಕರಣಗಳು ಸಕ್ರಿಯವಾಗಿವೆ.
ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,18,12,114ಕ್ಕೆ ಏರಿಕೆಯಾಗಿದೆ. ಈ ಪೈಕಿ 3,09,74,748 ಮಂದಿ ಗುಣಮುಖರಾಗಿದ್ದು, ಕೊರೊನಾ ವೈರಸ್ ಸೋಂಕಿನಿಂದ 4,26,290 ಜನರು ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 41,726 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಂದು ವಾರದಲ್ಲಿ ಕೋವಿಡ್ ದೃಢಪಟ್ಟ ಪ್ರಕರಣಗಳ ದರ ಶೇ.2.37ರಷ್ಟಿದೆ.
ದೇಶದಾದ್ಯಂತ ಒಟ್ಟು 48.93 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.