ADVERTISEMENT

Covid-19 India Update: ಹೊಸ ಪ್ರಕರಣಗಳು ಮತ್ತೆ ಏರಿಕೆ, 338 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಸೆಪ್ಟೆಂಬರ್ 2021, 4:47 IST
Last Updated 9 ಸೆಪ್ಟೆಂಬರ್ 2021, 4:47 IST
ಜಮ್ಮುವಿನಲ್ಲಿ ಕೋವಿಡ್‌ ಪರೀಕ್ಷೆಗಾಗಿ ಮಹಿಳೆಯೊಬ್ಬರ ಮೂಗಿನ ದ್ರವ ಸಂಗ್ರಹಿಸುತ್ತಿರುವ ಆರೋಗ್ಯ ಸಿಬ್ಬಂದಿ
ಜಮ್ಮುವಿನಲ್ಲಿ ಕೋವಿಡ್‌ ಪರೀಕ್ಷೆಗಾಗಿ ಮಹಿಳೆಯೊಬ್ಬರ ಮೂಗಿನ ದ್ರವ ಸಂಗ್ರಹಿಸುತ್ತಿರುವ ಆರೋಗ್ಯ ಸಿಬ್ಬಂದಿ   

ನವದೆಹಲಿ: ದೇಶದಾದ್ಯಂತ ಗುರುವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 43,263 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 40,567 ಜನ ಚೇತರಿಸಿಕೊಂಡಿದ್ದರೆ, 338 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 4,41,749ಕ್ಕೆ ಏರಿಕೆಯಾಗಿದೆ.

ಹೊಸ ಪ್ರಕರಣಗಳ ಸಂಖ್ಯೆ 24 ಗಂಟೆಗಳಲ್ಲಿ ಶೇ 14ರಷ್ಟು ಏರಿಕೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 3.31 ಕೋಟಿ ದಾಟಿದ್ದು, ಈ ಪೈಕಿ 3.23 ಕೋಟಿಗೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 3,93,614 ಪ್ರಕರಣಗಳು ಸಕ್ರಿಯವಾಗಿವೆ.

ಕೇರಳದಲ್ಲಿ ಬುಧವಾರ 30,196 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ ಮತ್ತು 181 ಮಂದಿ ಸಾವಿಗೀಡಾಗಿರುವುದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಇಳಿಮುಖವಾಗಿದ್ದ ಸೋಂಕು ಮತ್ತೆ ಸಾಂಕ್ರಾಮಿಕವಾಗಿರುವ ಲಕ್ಷಣಗಳು ಕಂಡು ಬಂದಿವೆ. ಅಲ್ಲಿ 4,174 ಹೊಸ ಪ್ರಕರಣಗಳು ಮತ್ತು 65 ಮಂದಿ ಮೃತಪಟ್ಟಿರುವುದು ವರದಿಯಾಗಿದೆ.

ADVERTISEMENT

ಭಾರತದಾದ್ಯಂತ ಈವರೆಗೂ 71.65 ಕೋಟಿಗೂ ಅಧಿಕ ಡೋಸ್‌ ಕೋವಿಡ್‌ ಲಸಿಕೆ ಹಾಕಲಾಗಿದೆ.

ಒಟ್ಟು ಪ್ರಕರಣಗಳ ಪೈಕಿ ಶೇ 1.19ರಷ್ಟು ಪ್ರಕರಣಗಳು ಸಕ್ರಿಯವಾಗಿವೆ ಹಾಗೂ ಗುಣಮುಖ ಪ್ರಮಾಣ ಶೇ 97.48ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ನಿತ್ಯ ಕೋವಿಡ್‌ ದೃಢ ಪ್ರಮಾಣ ಶೇ 2.38ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.