ADVERTISEMENT

Covid-19 India Update: 47 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 275 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಮಾರ್ಚ್ 2021, 4:38 IST
Last Updated 24 ಮಾರ್ಚ್ 2021, 4:38 IST
ಕೊರೊನಾ ವೈರಸ್‌ ಸೋಂಕು ಪರೀಕ್ಷೆ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ ಸೋಂಕು ಪರೀಕ್ಷೆ (ಸಾಂದರ್ಭಿಕ ಚಿತ್ರ)   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 47,262 ಕೋವಿಡ್‌ ಹೊಸ ಪ್ರಕರಣಗಳು ವರದಿಯಾಗಿದ್ದು, 275 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 1,17,34,058 ಕ್ಕೆ ಏರಿಕೆಯಾಗಿದೆ. ಆ ಪೈಕಿ 1,60,441 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 1,12,05,160 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 3,68,457 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರ 2,31,942, ಕೇರಳ 24,192, ಪಂಜಾಬ್‌ 19,403, ಕರ್ನಾಟಕ 15,614, ಚಂಡೀಗಡ 10,491, ತಮಿಳುನಾಡಿನಲ್ಲಿ 9,145 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

ADVERTISEMENT

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್‌) ಪ್ರಕಾರ, ಮಾರ್ಚ್ 23 ರವರೆಗೆ 23,64,38,861 ಕೊರೊನಾ ಸೋಂಕು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಮಂಗಳವಾರ 10,25,628 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.