ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 62,258 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿದ್ದು, 291 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 1,19,08,910 ಕ್ಕೆ ಏರಿಕೆಯಾಗಿದೆ. ಆ ಪೈಕಿ 1,61,240 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 1,12,95,023 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 4,52,647 ಸಕ್ರಿಯ ಪ್ರಕರಣಗಳಿವೆ.
ಮಹಾರಾಷ್ಟ್ರ 2,83,772, ಕೇರಳ 24,584, ಪಂಜಾಬ್ 22,652, ಕರ್ನಾಟಕ 19,572, ಚಂಡೀಗಡ 15,307, ಮಧ್ಯಪ್ರದೇಶ 12,038, ತಮಿಳುನಾಡಿನಲ್ಲಿ 11,318, ಗುಜರಾತ್‌ನಲ್ಲಿ 10,134, ಸಕ್ರಿಯ ಪ್ರಕರಣಗಳು ವರದಿಯಾಗಿವೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಪ್ರಕಾರ, ಮಾರ್ಚ್ 26 ರವರೆಗೆ 23,97,69,553 ಕೊರೊನಾ ಸೋಂಕು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಶುಕ್ರವಾರ 11,64,915 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.