ADVERTISEMENT

Covid India Update| 24 ಗಂಟೆಯಲ್ಲಿ 6,298 ಹೊಸ ಪ್ರಕರಣ: 23 ಸಾವು 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಸೆಪ್ಟೆಂಬರ್ 2022, 5:37 IST
Last Updated 16 ಸೆಪ್ಟೆಂಬರ್ 2022, 5:37 IST
ಕೋವಿಡ್‌ ಪತ್ತೆ ಪರೀಕ್ಷೆಯ ಸಾಂದರ್ಭಿಕ ಚಿತ್ರ
ಕೋವಿಡ್‌ ಪತ್ತೆ ಪರೀಕ್ಷೆಯ ಸಾಂದರ್ಭಿಕ ಚಿತ್ರ    

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 6,298 ಹೊಸ ಕೋವಿಡ್‌ ಪ್ರಕರಣಗಳನ್ನು ಕಂಡಿದೆ. ಇದರೊಂದಿಗೆ ಒಟ್ಟಾರೆ ಪ್ರಕರಣಗಳ ಸಂಖ್ಯೆ 4,45,22,777ಕ್ಕೆ ಏರಿದೆ.

ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 46,748ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

ಒಂದು ದಿನದ ಅವಧಿಯಲ್ಲಿ ಕೋವಿಡ್‌ ಕಾರಣದಿಂದಾಗಿ 23 ಸಾವು ಸಂಭವಿಸಿದ್ದು, ಒಟ್ಟಾರೆ ಸಾವಿನ ಸಂಖ್ಯೆ 5,28,273ಕ್ಕೆ ಏರಿದೆ.

ADVERTISEMENT

ದೈನಂದಿನ ಪಾಸಿಟಿವಿಟಿ ದರವು ಶೇಕಡ 1.89ರಷ್ಟಿದೆ ಎಂಬುದು ಅಂಕಿ ಅಂಶಗಳಿಂದ ಗೊತ್ತಾಗಿದೆ.

ದೇಶದಲ್ಲಿ ಈ ವರೆಗೆ 216 ಕೋಟಿಡೋಸ್‌ ಕೋವಿಡ್‌ ಲಸಿಕೆಗಳನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.