ADVERTISEMENT

India Covid Update: 67,084 ಹೊಸ ಪ್ರಕರಣ, 1,241 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಫೆಬ್ರುವರಿ 2022, 5:16 IST
Last Updated 10 ಫೆಬ್ರುವರಿ 2022, 5:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ಗುರುವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 67,084 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೂಲಕ ಬುಧವಾರಕ್ಕೆ (ಫೆ.9) ಹೋಲಿಸಿದಾಗ ಕೋವಿಡ್ ಪ್ರಕರಣ ಹಾಗೂ ದೃಢ ಪ್ರಮಾಣದಲ್ಲಿ ಇಳಿಕೆಯಾಗಿವೆ. ಬುಧವಾರದಂದು 71,365 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು.

ಕೋವಿಡ್ ದೃಢ ಪ್ರಮಾಣವು ಶೇಕಡ 4.44ರಷ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,90,789ಕ್ಕೆ ತಲುಪಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 1,241 ಮಂದಿ ಮೃತಪಟ್ಟಿದ್ದು, ಇದುವರೆಗೆ ಒಟ್ಟು 5,06,520 ಮಂದಿ ಅಸುನೀಗಿದ್ದಾರೆ.

ಇದೇ ಅವಧಿಯಲ್ಲಿ 1,67,882 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದುವರೆಗೆ ಒಟ್ಟು 4,11,80,751 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಇದುವರೆಗೆ 171.28 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಹಾಗೆಯೇ ಇದುವರೆಗೆ 74.61 ಕೋಟಿ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.