ADVERTISEMENT

Covid-19 India Update: 7,145 ಹೊಸ ಪ್ರಕರಣ, 289 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಡಿಸೆಂಬರ್ 2021, 6:00 IST
Last Updated 18 ಡಿಸೆಂಬರ್ 2021, 6:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ ಹೊಸದಾಗಿ 7,145 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 289 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 3,47,33,194 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,77,158 ಮಂದಿ ಸಾವಿಗೀಡಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 8,706 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 3,41,71,471 ಜನರು ಚೇತರಿಸಿಕೊಂಡಿದ್ದಾರೆ.

ADVERTISEMENT

ಸದ್ಯ ದೇಶದಲ್ಲಿ 84,565 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ 136.7 ಕೋಟಿಗೂ ಅಧಿಕ ಡೋಸ್‌ ಕೋವಿಡ್‌ ಲಸಿಕೆ ವಿತರಣೆಯಾಗಿದೆ.

ಕೇರಳದಲ್ಲಿ 33,098, ಮಹಾರಾಷ್ಟ್ರದಲ್ಲಿ 10,582, ತಮಿಳುನಾಡಿನಲ್ಲಿ 7,407, ಪಶ್ಚಿಮ ಬಂಗಾಳದಲ್ಲಿ 7,513, ಕರ್ನಾಟಕದಲ್ಲಿ 7,105 ಸಕ್ರಿಯ ಪ್ರಕರಣಗಳಿವೆ.

ಕೋವಿಡ್‌–19 ರೂಪಾಂತರ ತಳಿ ‘ಓಮೈಕ್ರಾನ್‌’ ವೈರಾಣು ದೃಢಪಟ್ಟವರ ಸಂಖ್ಯೆ ದೇಶದಲ್ಲಿ ಶುಕ್ರವಾರ 101ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.