ADVERTISEMENT

Covid India Update| ಇಂದು 8,013 ಪ್ರಕರಣಗಳು ಪತ್ತೆ: 119 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಫೆಬ್ರುವರಿ 2022, 4:03 IST
Last Updated 28 ಫೆಬ್ರುವರಿ 2022, 4:03 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 8,013 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 119 ಮಂದಿ ಮೃತಪಟ್ಟಿದ್ದಾರೆ.

ಈ ಒಂದು ದಿನದ ಅವಧಿಯಲ್ಲಿ 16,765 ಮಂದಿ ಕಾಯಿಲೆಯಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಸದ್ಯ ದೇಶದಲ್ಲಿ 1,02,601 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಪಾಸಿಟಿವಿಟಿ ದರ ಶೇ 1.11ರಷ್ಟು ಇದೆ.

ADVERTISEMENT

ಒಟ್ಟಾರೆ ಸಾವಿನ ಸಂಖ್ಯೆ 5,13,843ಕ್ಕೆ ತಲುಪಿದ್ದು, ಈ ವರೆಗೆ ದೇಶದಲ್ಲಿ 177 ಕೋಟಿ ಡೋಸ್‌ ಲಸಿಕೆಗಳನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.