ADVERTISEMENT

India Covid Updates: ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯ ಕುಸಿತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಅಕ್ಟೋಬರ್ 2022, 4:50 IST
Last Updated 26 ಅಕ್ಟೋಬರ್ 2022, 4:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 830ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 16 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,46,45,768ಕ್ಕೆ ಏರಿಕೆಯಾಗಿದೆ. ಆ ಪೈಕಿ 5,28,981 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 4,40,95,180 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 21,607 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಕೇರಳದಲ್ಲಿ 3,629, ತಮಿಳುನಾಡಿನಲ್ಲಿ 2,736, ಕರ್ನಾಟಕದಲ್ಲಿ 2,142, ಮಹಾರಾಷ್ಟ್ರದಲ್ಲಿ 2,496, ಪಶ್ಚಿಮ ಬಂಗಾಳದಲ್ಲಿ 1,215 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಇದುವರೆಗೆ 219.6 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.