ADVERTISEMENT

Covid-19 India Update| ಇಂದು 84 ಸಾವಿರ ಸೋಂಕು, 4,002 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಜೂನ್ 2021, 4:41 IST
Last Updated 12 ಜೂನ್ 2021, 4:41 IST
ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗುತ್ತಿರುವ ಯುವತಿ (ಪಿಟಿಐ ಚಿತ್ರ)
ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗುತ್ತಿರುವ ಯುವತಿ (ಪಿಟಿಐ ಚಿತ್ರ)   

ನವದೆಹಲಿ: ಭಾರತದಲ್ಲಿ ಇಂದು 84,332 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 70 ದಿನಗಳಲ್ಲೇ ಇದು ಅತ್ಯಂತ ಕಡಿಮೆ ಎನಿಸಿದೆ.ಜೊತೆಗೆ 4,002 ಸಾವುಗಳು ಸಂಭವಿಸಿವೆ.

ಇಂದಿನ ಹೊಸ ಪ್ರಕರಣಗಳೂ ಸೇರಿದಂತೆ ಭಾರತದ ಒಟ್ಟಾರೆ ಸೋಂಕು ಪ್ರಕರಣಗಳು 2,93,59,155ಕ್ಕೆ ಏರಿಕೆಯಾಗಿದೆ. ಒಟ್ಟು ಸಾವುಗಳ ಸಂಖ್ಯೆ 3,67,081ಕ್ಕೆ ತಲುಪಿದೆ.

ದೇಶದಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,80,690ಕ್ಕೆ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ADVERTISEMENT

ಭಾರತದಲ್ಲಿ ಈ ವರೆಗೆ 24,96,00,304 ಮಂದಿಗೆ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.