ADVERTISEMENT

Covid-19 India Update: 9,283 ಪ್ರಕರಣ ದೃಢ, 437 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ನವೆಂಬರ್ 2021, 5:25 IST
Last Updated 24 ನವೆಂಬರ್ 2021, 5:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 9,283 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 437 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 3,45,35,763 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,66,584 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 3,39,57,698 ಮಂದಿ ಸೋಂಕಿನಿಂದ ಚೇತರಿಸಿಕೊಂಡಂತಾಗಿದೆ.

ಸದ್ಯ ದೇಶದಲ್ಲಿ 1,11,481 ಸಕ್ರಿಯ ಪ್ರಕರಣಗಳಿದ್ದು, ಇದು 537 ದಿನಗಳಲ್ಲೇ ಅತಿ ಕಡಿಮೆ ಆಗಿದೆ.

ADVERTISEMENT

ದೇಶದಲ್ಲಿ ಈವರೆಗೆ 118.4 ಕೋಟಿ ಡೋಸ್‌ ಲಸಿಕೆಯನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.