ADVERTISEMENT

Covid-19 India Update: ಒಂದೇ ದಿನ 15 ಸಾವಿರಕ್ಕೂ ಹೆಚ್ಚು ಮಂದಿ ಗುಣಮುಖ

ಏಜೆನ್ಸೀಸ್
Published 12 ಫೆಬ್ರುವರಿ 2021, 4:20 IST
Last Updated 12 ಫೆಬ್ರುವರಿ 2021, 4:20 IST
ಕೊರೊನಾ ವೈರಸ್‌ ಸೋಂಕು ಪರೀಕ್ಷೆ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ ಸೋಂಕು ಪರೀಕ್ಷೆ (ಸಾಂದರ್ಭಿಕ ಚಿತ್ರ)   

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 15,858 ಮಂದಿ ಕೋವಿಡ್‌ ಸೋಂಕಿತರು ಗುಣಮುಖರಾಗಿದ್ದಾರೆ. ಜತೆಗೆ, 9,309 ಹೊಸ ಪ್ರಕರಣಗಳು ದೃಢಪಟ್ಟಿದ್ದು, 87 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 1,08,80,603ಕ್ಕೆ ಏರಿಕೆಯಾಗಿದೆ. ಆ ಪೈಕಿ 1,55,447 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 1,05,89,230 ಮಂದಿ ಗುಣಮುಖರಾಗಿದ್ದು, ಸದ್ಯ 1,35,926 ಸಕ್ರಿಯ ಪ್ರಕರಣಗಳಿವೆ.

ಕೇರಳದಲ್ಲಿ 64,180, ಮಹಾರಾಷ್ಟ್ರದಲ್ಲಿ 31,437, ಕರ್ನಾಟಕದಲ್ಲಿ 5,977, ತಮಿಳುನಾಡಿನಲ್ಲಿ 4,294, ಪಶ್ಚಿಮ ಬಂಗಾಳದಲ್ಲಿ 4,313 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ ಇದುವರೆಗೆ 75,05,010 ಮಂದಿ ಕೋವಿಡ್‌ ಲಸಿಕೆಯನ್ನು ಪಡೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.