ADVERTISEMENT

India Covid Update: ಹೊಸದಾಗಿ 9,436 ಪ್ರಕರಣ ದೃಢ, 30 ಮಂದಿ ಸಾವು

ಪಿಟಿಐ
Published 28 ಆಗಸ್ಟ್ 2022, 5:00 IST
Last Updated 28 ಆಗಸ್ಟ್ 2022, 5:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಭಾನುವಾರ ಬೆಳಿಗ್ಗೆ ಕೊನೆಗೊಂಡ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 9,436 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 30 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಮೂಲಕ 10,000ಗಿಂತ ಕಡಿಮೆ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ದೇಶದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 86,591ಕ್ಕೆ ಇಳಿಕೆಯಾಗಿದೆ.

ADVERTISEMENT

ದೇಶದಲ್ಲಿ ಈವರೆಗೆ 4,44,08,132 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,27,754 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ 2.93 ಮತ್ತು ವಾರದ ಪಾಸಿಟಿವಿಟಿ ಪ್ರಮಾಣ ಶೇ 2.70 ಆಗಿದೆ.

ಒಟ್ಟು ಸೋಂಕಿತರ ಪೈಕಿ ಶೇ 0.19 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.62 ಆಗಿದೆ.

ದೇಶದಲ್ಲಿ ಈವರೆಗೆ 88.50 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 211.66 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.