ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 9,765 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 477 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಒಂದೇ ದಿನ 8,548 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 3,40,37,054 ಕ್ಕೆ ತಲುಪಿದೆ.
ಈ ವರೆಗೆ 3,46,06,541 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 4,69,724 ಮಂದಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.
ದೇಶದಲ್ಲಿ ಸದ್ಯ ಒಟ್ಟು 99,763 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ ಈವರೆಗೆ 125 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ... ‘ಹೆಚ್ಚು ಅಪಾಯ’ದ ದೇಶಗಳಿಂದ ಬಂದವರ ಪೈಕಿ 6 ಜನರಲ್ಲಿ ಕೋವಿಡ್ ದೃಢ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.