ADVERTISEMENT

India Covid-19 Updates: ಹೊಸ ಪ್ರಕರಣಗಳ ಸಂಖ್ಯೆ ಏರಿಕೆ, 71 ಜನರು ಸಾವು

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2022, 6:19 IST
Last Updated 6 ಏಪ್ರಿಲ್ 2022, 6:19 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ 1,086 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ನಿನ್ನೆಗಿಂತ ಇಂದು ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದೇ ಅವಧಿಯಲ್ಲಿ 71 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಒಟ್ಟು ಮೃತರ ಸಂಖ್ಯೆ 5,21,487ಕ್ಕೆ ಏರಿಕೆಯಾಗಿದೆ.

ದಿನದಿಂದ ದಿನಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಸದ್ಯ ದೇಶದಲ್ಲಿ 11,871 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಇದು ಶೇ 0.03ರಷ್ಟಿದೆ.

ADVERTISEMENT

ಕಳೆದ 24 ಗಂಟೆಗಳಲ್ಲಿ 1,198 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ 4,24,97,568 ಜನರು ಗುಣಮುಖರಾಗಿದ್ದಾರೆ. ಚೇತರಿಕೆ ದರ ಶೇ 98.76ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ 0.23 ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.22 ರಷ್ಟಿದೆ.

ದೇಶದಾದ್ಯಂತ ಮಂಗಳವಾರ 4,81,374 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 79.20 ಕೋಟಿ ಜನರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ.

ಬುಧವಾರ ಬೆಳಗ್ಗೆ 7 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೇಶದಾದ್ಯಂತ ಈವರೆಗೆ 185.04 ಕೋಟಿ ಕೋವಿಡ್-19 ಲಸಿಕಾ ಡೋಸ್‌ ಅನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.