ADVERTISEMENT

India Covid Update: ದೇಶದಲ್ಲಿ 38 ಸಾವು, 4,912 ಹೊಸ ಪ್ರಕರಣಗಳು ವರದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಸೆಪ್ಟೆಂಬರ್ 2022, 7:03 IST
Last Updated 24 ಸೆಪ್ಟೆಂಬರ್ 2022, 7:03 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಲ್ಲಿ ಕೋವಿಡ್‌–19 ದೃಢಪಟ್ಟ 4,912 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಸಚಿವಾಲಯ ಬೆಳಗ್ಗೆ 8 ಗಂಟೆಗೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಇದುವರೆಗೆ ಒಟ್ಟು4,45,63,337 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ4,39,90,414 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಹೊಸದಾಗಿ ವರದಿಯಾಗಿರುವ 38 ಪ್ರಕರಣಗಳೂ ಸೇರಿದಂತೆ 5,28,487 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಇನ್ನು44,436 ಸಕ್ರಿಯ ಪ್ರಕರಣಗಳು ದೇಶದಲ್ಲಿವೆ.

ದೃಢಪಟ್ಟ ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.10ರಷ್ಟಿದ್ದು, ಗುಣಮುಖರಾದವರ ಪ್ರಮಾಣ ಶೇ98.71 ರಷ್ಟು ಇದೆ. ದೈನಂದಿನ ಸೋಂಕು ದೃಢ ದರ ಶೇ1.62 ಮತ್ತು ವಾರದ ಸೋಂಕು ದೃಢ ದರ ಶೇ1.69 ಆಗಿದೆ ಎಂದು ಸಚಿವಾಲಯ ಹೇಳಿದೆ.

ADVERTISEMENT

ಇಲಾಖೆಯ ಮಾಹಿತಿ ಪ್ರಕಾರ ಇದುವರೆಗೆ 217.41 ಕೋಟಿ ಡೋಸ್‌ ಕೋವಿಡ್ ಲಸಿಕೆ ವಿತರಿಸಲಾಗಿದೆ.

ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 2020ರ ಆಗಸ್ಟ್‌ 7 ರಂದು 20 ಲಕ್ಷದ ಗಡಿ ದಾಟಿತ್ತು. ಅದೇ ವರ್ಷದ ಆಗಸ್ಟ್‌ 23ರಂದು 30 ಲಕ್ಷ, ಸೆಪ್ಟೆಂಬರ್‌ 5ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16ರಂದು 50 ಲಕ್ಷ ಪ್ರಕರಣಗಳು ವರದಿಯಾಗಿದ್ದವು. ನಂತರ ಸೆಪ್ಟೆಂಬರ್‌ 28, ಅಕ್ಟೋಬರ್‌ 11, ಅಕ್ಟೋಬರ್‌ 29 ಹಾಗೂ ನವೆಂಬರ್‌ 20ರಂದು ಕ್ರಮವಾಗಿ 60 ಲಕ್ಷ, 70 ಲಕ್ಷ, 80 ಲಕ್ಷ ಹಾಗೂ 90 ಲಕ್ಷ ಪ್ರಕರಣಗಳು ದಾಖಲಾಗಿದ್ದವು.

ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ2020ರ ಡಿಸೆಂಬರ್‌ 19ರಂದು ಒಂದು ಕೋಟಿ, 2021ರ ಮೇ 4 ರಂದು ಎರಡು ಕೋಟಿ ಹಾಗೂ ಜೂನ್‌ 23ರಂದು ಮೂರು ಕೋಟಿಗಡಿ ದಾಟಿತ್ತು. ಈ ಸಂಖ್ಯೆಇದೇ ವರ್ಷ (2022) ಜನವರಿ 25ರಂದು ನಾಲ್ಕು ಕೋಟಿಗಿಂತ ಹೆಚ್ಚಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.