ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 56,211 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. 271 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದು ಈ ವರ್ಷದಲ್ಲಿ ದಾಖಲಾದ ಅತಿ ಹೆಚ್ಚಿನ ಪ್ರಕರಣಗಳಾಗಿವೆ.
ಒಂದು ದಿನದ ಅವಧಿಯಲ್ಲಿ 37,028 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 1,20,95,855 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,62,114 ಮಂದಿ ಸಾವಿಗೀಡಾಗಿದ್ದಾರೆ.
ಈವರೆಗೂ 1,13,93,021 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 5,40,720 ಸಕ್ರಿಯ ಪ್ರಕರಣಗಳಿವೆ. ಈವರೆಗೆ 6.11 (6,11,13,354) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಮಾ. 29ರ ಹೊತ್ತಿಗೆ ದೇಶದಲ್ಲಿ 24,26,50,025 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಶುಕ್ರವಾರ ಒಂದೇ ದಿನ 7,85,864 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್) ತಿಳಿಸಿದೆ.
ಭಾರತದ ಕೋವಿಡ್-19 ಒಟ್ಟು ಪ್ರಕರಣಗಳು ಕಳೆದ ವರ್ಷ ಆಗಸ್ಟ್ 7 ರಂದು 20 ಲಕ್ಷ, ಆಗಸ್ಟ್ 23 ರಂದು 30 ಲಕ್ಷ, ಸೆಪ್ಟೆಂಬರ್ 5 ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16 ರಂದು 50 ಲಕ್ಷ ದಾಟಿತ್ತು.
ಸೋಂಕು ಪ್ರಕರಣಗಳ ಪೈಕಿ ಮೊದಲನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ 27,45,518 ಜನರಿಗೆ ಸೋಂಕು ತಗುಲಿದ್ದು, 3,37,928 ಸಕ್ರಿಯ ಪ್ರಕರಣಗಳಿವೆ. ಈವರೆಗೆ 23,53,307 ಜನರು ಸೋಂಕಿನಿಂದ ಗುಣಮುಖರಾಗಿದ್ದು, 54,283 ಜನರು ಸಾವಿಗೀಡಾಗಿದ್ದಾರೆ.
ಎರಡನೇ ಸ್ಥಾನದಲ್ಲಿರುವ ಕೇರಳದಲ್ಲಿ ಒಟ್ಟಾರೆ 11,19,542 ಜನರಿಗೆ ಸೋಂಕು ತಗುಲಿದೆ. 24,533 ಸಕ್ರಿಯ ಪ್ರಕರಣಗಳೊಂದಿಗೆ 10,90,419 ಜನರು ಗುಣಮುಖರಾಗಿದ್ದು, 4,590 ಜನರು ಸಾವಿಗೀಡಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.