ADVERTISEMENT

Covid-19 India Update: ಸೋಂಕಿತರ ಸಂಖ್ಯೆಯಲ್ಲಿ ಏರಿಕೆ, 89,129 ಹೊಸ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಏಪ್ರಿಲ್ 2021, 5:05 IST
Last Updated 3 ಏಪ್ರಿಲ್ 2021, 5:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 89,129 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 714 ಸೋಂಕಿತರು ಮೃತಪಟ್ಟಿದ್ದಾರೆ ಮತ್ತು 44,202 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 1,23,92,260 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,64,110 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೂ ಒಟ್ಟು 1,15,69,241 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 6,58,909 ಸಕ್ರಿಯ ಪ್ರಕರಣಗಳಿವೆ. ಈವರೆಗೆ 7.30 (7,30,54,295) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ADVERTISEMENT

ಏ. 02ರ ಹೊತ್ತಿಗೆ ದೇಶದಲ್ಲಿ 24,69,59,192 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಶುಕ್ರವಾರ ಒಂದೇ ದಿನ 10,46,605 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್‌) ತಿಳಿಸಿದೆ.

ಸೋಂಕು ಪ್ರಕರಣಗಳ ಪೈಕಿ ಮೊದಲನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ 29,04,076 ಜನರಿಗೆ ಸೋಂಕು ತಗುಲಿದ್ದು, 3,91,203 ಸಕ್ರಿಯ ಪ್ರಕರಣಗಳಿವೆ. ಈವರೆಗೆ 24,57,494 ಜನರು ಸೋಂಕಿನಿಂದ ಗುಣಮುಖರಾಗಿದ್ದು, 55,379 ಜನರು ಸಾವಿಗೀಡಾಗಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಕೇರಳದಲ್ಲಿ ಒಟ್ಟಾರೆ 11,29,890 ಜನರಿಗೆ ಸೋಂಕು ತಗುಲಿದೆ. 26,718 ಸಕ್ರಿಯ ಪ್ರಕರಣಗಳೊಂದಿಗೆ 10,98,526 ಜನರು ಗುಣಮುಖರಾಗಿದ್ದು, 4,646 ಜನರು ಸಾವಿಗೀಡಾಗಿದ್ದಾರೆ.

ಇನ್ನುಳಿದಂತೆ ಕರ್ನಾಟಕದಲ್ಲಿ 10,06,229, ಆಂಧ್ರ ಪ್ರದೇಶದಲ್ಲಿ 9,04,548, ತಮಿಳುನಾಡಿನಲ್ಲಿ 8,92,780 ಮತ್ತು ದೆಹಲಿಯಲ್ಲಿ 6,68,814 ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.