ADVERTISEMENT

Covid-19 India Updates: ಮಹಾರಾಷ್ಟ್ರ- ಕೇರಳದಲ್ಲಿ ಅತ್ಯಧಿಕ ಸಕ್ರಿಯ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಮಾರ್ಚ್ 2021, 4:34 IST
Last Updated 16 ಮಾರ್ಚ್ 2021, 4:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ಮಹಾರಾಷ್ಟ್ರ ಮತ್ತು ಕೇರಳದಲ್ಲೇ ಅತ್ಯಧಿಕ ಸಕ್ರಿಯ ಪ್ರಕರಣಗಳು ಇದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 24,492 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. 118 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 1,14,09,831 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,58,856 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೂ 1,10,27,543 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 2,23,432 ಸಕ್ರಿಯ ಪ್ರಕರಣಗಳಿವೆ. ಈವರೆಗೆ 3. 29 (3,29,47,432) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ADVERTISEMENT

ಮಾ. 15ರ ಹೊತ್ತಿಗೆ ದೇಶದಲ್ಲಿ 22,82,80,763 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಮವಾರ ಒಂದೇ ದಿನ 8,73,350 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್‌) ತಿಳಿಸಿದೆ.

ಸೋಂಕು ಪ್ರಕರಣಗಳ ಪೈಕಿ ಮೊದಲನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ 23,14,413 ಜನರಿಗೆ ಸೋಂಕು ತಗುಲಿದ್ದು, 1,27,480 ಸಕ್ರಿಯ ಪ್ರಕರಣಗಳಿವೆ. ಈವರೆಗೆ 21,34,072 ಜನರು ಸೋಂಕಿನಿಂದ ಗುಣಮುಖರಾಗಿದ್ದು, 52,861 ಜನರು ಸಾವಿಗೀಡಾಗಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಕೇರಳದಲ್ಲಿ ಒಟ್ಟಾರೆ 10,91,270 ಜನರಿಗೆ ಸೋಂಕು ತಗುಲಿದೆ. 29,777 ಸಕ್ರಿಯ ಪ್ರಕರಣಗಳೊಂದಿಗೆ 10,57,097 ಜನರು ಗುಣಮುಖರಾಗಿದ್ದು, 4,396 ಜನರು ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.