ADVERTISEMENT

Covid-19 India Update: 26,291 ಹೊಸ ಪ್ರಕರಣ, 2.19 ಲಕ್ಷ ಸಕ್ರಿಯ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಮಾರ್ಚ್ 2021, 6:18 IST
Last Updated 15 ಮಾರ್ಚ್ 2021, 6:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 26,291 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 118 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 1,13,85,339 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,58,725 ಮಂದಿ ಸಾವಿಗೀಡಾಗಿದ್ದಾರೆ.

1,10,07,352 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 2,19,262 ಸಕ್ರಿಯ ಪ್ರಕರಣಗಳಿವೆ. ಈವರೆಗೆ 2. 99 (2,99,08,038) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ADVERTISEMENT

ಮಾ. 14ರ ಹೊತ್ತಿಗೆ ದೇಶದಲ್ಲಿ 22,74,07,413 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಭಾನುವಾರ ಒಂದೇ ದಿನ 7,03,772 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್‌) ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.