ADVERTISEMENT

Covid-19 India Update: ಮಹಾರಾಷ್ಟ್ರ-ಕರ್ನಾಟಕದಲ್ಲಿ ಸಕ್ರಿಯ ಪ್ರಕರಣಗಳು ಅಧಿಕ

ಪಿಟಿಐ
Published 31 ಮಾರ್ಚ್ 2021, 4:57 IST
Last Updated 31 ಮಾರ್ಚ್ 2021, 4:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 53,480 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. 354 ಸೋಂಕಿತರು ಮೃತಪಟ್ಟಿದ್ದಾರೆ ಮತ್ತು 41,280 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಅತ್ಯಧಿಕ ಸಕ್ರಿಯ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಮಹಾರಾಷ್ಟ್ರ ಮತ್ತು ಕರ್ನಾಟಕ ಮೊದಲನೇ ಮತ್ತು ಎರಡನೇ ಸ್ಥಾನಗಳಲ್ಲಿವೆ. ಕೇರಳ ನಂತರದ ಸ್ಥಾನವನ್ನು ಪಡೆದುಕೊಂಡಿದೆ. ನಾಲ್ಕನೇ ಸ್ಥಾನದಲ್ಲಿ ಪಂಜಾಬ್ ಇದೆ.

ದೇಶದಲ್ಲಿ ಈವರೆಗೆ ಒಟ್ಟು 1,21,49,335 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,62,468 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೂ 1,14,34,301 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 5,52,566 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಅಲ್ಲದೆ 6.30 (6,30,54,353) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮಾ. 31ರ ಹೊತ್ತಿಗೆ ದೇಶದಲ್ಲಿ 24,36,72,940 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಮಂಗಳವಾರ ಒಂದೇ ದಿನ 10,22,915 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್‌) ತಿಳಿಸಿದೆ.

ಸೋಂಕು ಪ್ರಕರಣಗಳ ಪೈಕಿ ಮೊದಲನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ 27,73,436 ಜನರಿಗೆ ಸೋಂಕು ತಗುಲಿದ್ದು, 3,41,887 ಸಕ್ರಿಯ ಪ್ರಕರಣಗಳಿವೆ. ಈವರೆಗೆ 23,77,127 ಜನರು ಸೋಂಕಿನಿಂದ ಗುಣಮುಖರಾಗಿದ್ದು, 54,422 ಜನರು ಸಾವಿಗೀಡಾಗಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಕೇರಳದಲ್ಲಿ ಒಟ್ಟಾರೆ 11,21,931 ಜನರಿಗೆ ಸೋಂಕು ತಗುಲಿದೆ. 24,960 ಸಕ್ರಿಯ ಪ್ರಕರಣಗಳೊಂದಿಗೆ 10,92,365 ಜನರು ಗುಣಮುಖರಾಗಿದ್ದು, 4,606 ಜನರು ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.