ADVERTISEMENT

Covid-19 India Updates: 14,545 ಹೊಸ ಪ್ರಕರಣ, 18,002 ಜನ ಗುಣಮುಖ

ಏಜೆನ್ಸೀಸ್
Published 22 ಜನವರಿ 2021, 6:02 IST
Last Updated 22 ಜನವರಿ 2021, 6:02 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 14,545 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, 18,002 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಮತ್ತು 163 ಜನರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,06,25,428ಕ್ಕೆ ತಲುಪಿದ್ದು, ಸದ್ಯ 1,88,688 ಸಕ್ರಿಯ ಪ್ರಕರಣಗಳಿವೆ ಮತ್ತು ಈವರೆಗೆ 1,02,83,708 ಜನರು ಗುಣಮುಖರಾಗಿದ್ದಾರೆ. ಕೋವಿಡ್‌ನಿಂದ ಒಟ್ಟು 1,53,032 ಜನರು ಸಾವಿಗೀಡಾಗಿದ್ದಾರೆ.

ಕೇರಳದಲ್ಲಿ ಅತಿ ಹೆಚ್ಚು (69,998)ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 46,836 ಸಕ್ರಿಯ ಪ್ರಕರಣಗಳೊಂದಿಗೆ ಮಹಾರಾಷ್ಟ್ರವು ಎರಡನೇ ಸ್ಥಾನದಲ್ಲಿದೆ.

ADVERTISEMENT

ಭಾರತದಲ್ಲಿ ಈವರೆಗೆ 10,43,534 ಜನರಿಗೆ ಕೊರೊನ ವೈರಸ್ ವಿರುದ್ಧದ ಲಸಿಕೆ ನೀಡಲಾಗಿದೆ.

ಜನವರಿ 21ರ ಹೊತ್ತಿಗೆ ದೇಶದಲ್ಲಿ 19,01,48,024 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಗುರುವಾರ ಒಂದೇ ದಿನ 8,00,242 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್‌) ತಿಳಿಸಿದೆ.

ಒಟ್ಟು ಕೋವಿಡ್-19 ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪಾಲು ಶೇ 1.81ಕ್ಕೆ ಕುಸಿದಿದೆ ಮತ್ತು ಚೇತರಿಕೆ ಪ್ರಮಾಣವು ಶೇ 96.75ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.