ದೆಹಲಿ ವಿಮಾನ ನಿಲ್ದಾಣದ ದೃಶ್ಯ
Credit: iStock Photo
ನವದೆಹಲಿ: ಟರ್ಕಿಯ ಕಂಪನಿ ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ನೀಡಲಾದ ಭದ್ರತಾ ಅನುಮತಿಯನ್ನು ರದ್ದುಗೊಳಿಸಿ ವಿಮಾನಯಾನ ಭದ್ರತಾ ಸಂಸ್ಥೆ (ಬಿಸಿಎಎಸ್) ಆದೇಶ ಹೊರಡಿಸಿದೆ.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ‘ಆಪರೇಷನ್ ಸಿಂಧೂರ’ ಅಡಿಯಲ್ಲಿ ಭಾರತವು ಇತ್ತೀಚೆಗೆ ನಡೆಸಿದ ದಾಳಿಯನ್ನು ಟರ್ಕಿ ಖಂಡಿಸಿತ್ತು. ಪಾಕಿಸ್ತಾನವು ಭಾರಿ ಪ್ರಮಾಣದಲ್ಲಿ ಟರ್ಕಿಯ ಡ್ರೋನ್‌ಗಳನ್ನು ಭಾರತದ ವಿರುದ್ಧ ಬಳಸಿತ್ತು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಮುಂಬೈ, ದೆಹಲಿ, ಕೊಚ್ಚಿ, ಕಣ್ಣೂರು, ಬೆಂಗಳೂರು, ಹೈದರಾಬಾದ್, ಗೋವಾ, ಅಹಮದಾಬಾದ್ ಮತ್ತು ಚೆನ್ನೈನ ವಿಮಾನ ನಿಲ್ದಾಣಗಳಲ್ಲಿ ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಯ ನಿರ್ವಹಿಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.