ADVERTISEMENT

ಕಾಂಗ್ರೆಸ್‌ ವಿರುದ್ಧದ ಟೀಕೆ ಬಿಟ್ಟು ಚೀನಾವನ್ನು ಹಿಮ್ಮೆಟ್ಟಿಸಿ: ಬಿಜೆಪಿಗೆ ಸಲಹೆ

ಪಿಟಿಐ
Published 26 ಜೂನ್ 2020, 13:35 IST
Last Updated 26 ಜೂನ್ 2020, 13:35 IST
ಲೋಕಸಭೆಯ ಹೊರಗೆ ಉಭಯಕುಶಲೋಪರಿಯಲ್ಲಿ ತೊಡಗಿರುವ ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ
ಲೋಕಸಭೆಯ ಹೊರಗೆ ಉಭಯಕುಶಲೋಪರಿಯಲ್ಲಿ ತೊಡಗಿರುವ ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ    

ಕೋಲ್ಕತ್ತಾ: ತನ್ನ ವಿಫಲ ಕಾರ್ಯತಂತ್ರದ ಪ್ರಮಾದಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್‌ ಅನ್ನು ಗುರಿಯಾಗಿರಿಸಿಕೊಂಡು ಟೀಕೆ ಮಾಡುವುದಕ್ಕೆ ಬದಲಾಗಿ ಕೇಂದ್ರ ಸರ್ಕಾರವು ಚೀನಾವನ್ನು ಹಿಮ್ಮೆಟ್ಟಿಸಲು ಮತ್ತು ಗಾಲ್ವಾನ್ ಕಣಿವೆಯಲ್ಲಿ ಕಳೆದುಕೊಂಡಿರುವ ಭೂಪ್ರದೇಶವನ್ನು ಮರಳಿ ವಶಪಡಿಸಿಕೊಳ್ಳಲು ತಯಾರಿ ನಡೆಸಲಿ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕರಾಗಿರುವ ಅಧೀರ್‌ ರಂಜನ್‌ ಚೌಧರಿ ಶುಕ್ರವಾರ ಹೇಳಿದ್ದಾರೆ.

ಪ್ರತೀಕಾರದ ವಿಷಯದಲ್ಲಿ ಮೋದಿ ಸರ್ಕಾರದ ಅಸಮರ್ಥತೆಯ ಲಾಭವನ್ನು ಚೀನಾ ಪಡೆದುಕೊಳ್ಳುತ್ತಿದೆ ಎಂದೂ ಅವರು ಎಚ್ಚರಿಸಿದ್ದಾರೆ.

ಆರೋಪ ಸಾಬೀತು ಮಾಡಿದರೆ ರಾಜೀನಾಮೆ ನೀಡುವೆ

ADVERTISEMENT

ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಭದ್ರತೆಗೆ ಧಕ್ಕೆಯುಂಟುಮಾಡಿದೆ ಎಂಬ ಆರೋಪವನ್ನು ಸಾಬೀತು ಮಾಡುವಂತೆ ಅವರು ಬಿಜೆಪಿ ನಾಯಕರಿಗೆ ಸವಾಲು ಹಾಕಿದರು. ಅಲ್ಲದೆ, ಅಂಥ ಆರೋಪಗಳೇನಾದರೂ ಸಾಬೀತಾದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಅವರು ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.