ADVERTISEMENT

ಭಾರತ ಒಂದು ಚಿಟಿಕೆ 'ಸಿಂಧೂರ'ದ ಮಹತ್ವವನ್ನು ಇಡೀ ಜಗತ್ತಿಗೆ ಸಾರಿದೆ; ಅಮಿತ್‌ ಶಾ

ಮೃತ್ಯುಂಜಯ ಬೋಸ್
Published 27 ಮೇ 2025, 9:24 IST
Last Updated 27 ಮೇ 2025, 9:24 IST
<div class="paragraphs"><p>ಅಮಿತ್‌ ಶಾ (ಸಂಗ್ರಹ ಚಿತ್ರ)&nbsp;</p></div>

ಅಮಿತ್‌ ಶಾ (ಸಂಗ್ರಹ ಚಿತ್ರ) 

   

ಪಿಟಿಐ

ಮುಂಬೈ: ಒಂದು ಚಿಟಿಕೆ ಸಿಂಧೂರದ ಮಹತ್ವವನ್ನು ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಭಾರತವು ಇಡೀ ಜಗತ್ತಿಗೆ ತೋರಿಸಿಕೊಟ್ಟಿದೆ ಎಂದು ಗೃಹ ಸಚಿವ ಅಮಿತ್‌ ಶಾ ಮಂಗಳವಾರ ತಿಳಿಸಿದ್ದಾರೆ.

ADVERTISEMENT

ಮುಂಬೈನ ಭುಲೇಶ್ವರ ಪ್ರದೇಶದ ಶ್ರೀ ಲಕ್ಷ್ಮಿ ನಾರಾಯಣ ದೇವಾಲಯದ 150ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಅವರು ಮಾತನಾಡಿದರು.

'ನಮ್ಮ ತಾಯಂದಿರು, ಸಹೋದರಿಯರು ಮತ್ತು ಮಗಳಿಗೆ ಸಿಂಧೂರ ಎಷ್ಟು ಮುಖ್ಯವಾಗಿದೆ' ಎಂಬುವುದು ತಿಳಿದಿದೆ ಎಂದು ಶಾ ಪುನರುಚ್ಚರಿಸಿದ್ದಾರೆ.

ಅಮಿತ್‌ ಶಾ ಅವರ ಈ ಹೇಳಿಕೆ, ಜಾಗತಿಕವಾಗಿ ಸಮುದಾಯಕ್ಕೆ ನೀಡಿದ ಸಂದೇಶ ಮಾತ್ರವಲ್ಲ. ಬದಲಿಗೆ ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ್ ಮತ್ತು ಕದನ ವಿರಾಮಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದ ವಿರೋಧ ಪಕ್ಷಗಳನ್ನು ಗುರಿಯಾಗಿಸಿ ಕಿಡಿಕಾರಿದ್ದಾರೆ.

ಅಮಿತ್‌ ಶಾ ಅವರು ಮೂರು ದಿನಗಳ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದರು.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ 'ಆಪರೇಷನ್‌ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.

ಭಾರತವು ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್‌ಗೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್‌. ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.