ನವದೆಹಲಿ: ಕಳೆದೊಂದು ದಶಕದಲ್ಲಿ ಭಾರತವು ಕ್ರೀಡೆಯಲ್ಲಿ ಗಮನಾರ್ಹ ಪರಿವರ್ತನೆಯನ್ನು ಕಂಡಿದೆ. ಕ್ರೀಡಾಪಟುಗಳನ್ನು ಬೆಂಬಲಿಸುವುದು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದರೊಂದಿಗೆ ಭಾರತವನ್ನು ಕ್ರೀಡಾ ಶ್ರೇಷ್ಠತೆಯ ಜಾಗತಿಕ ಕೇಂದ್ರವನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇದ್ರ ಮೋದಿ ಅವರು ಹೇಳಿದ್ದಾರೆ.
ಅಂತರ ರಾಷ್ಟ್ರೀಯ ಕ್ರೀಡಾ ದಿನದ ಶುಭಾಶಯ ಕೋರಿದ ನರೇಂದ್ರ ಮೋದಿಯವರು, ಮೇಜರ್ ಧ್ಯಾನ್ ಚಂದ್ ಅವರಿಗೆ ನಾವು ಗೌರವ ಸಲ್ಲಿಸುತ್ತೇವೆ. ಅವರ ಶ್ರೇಷ್ಠತೆ ಯುವ ಪೀಳಿಗೆಗೆ ಇಂದಿಗೂ ಸ್ಫೂರ್ತಿ ನೀಡುತ್ತಲೇ ಇದೆ ಎಂದು X ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ನಮ್ಮ ರಾಷ್ಟ್ರದಲ್ಲಿ ಆರೋಗ್ಯಕರವಾದ ಕ್ರೀಡಾ ಪರಿಸರ ವ್ಯವಸ್ಥೆಯನ್ನು ನೋಡುತ್ತಿದ್ದೇವೆ ಎಂದು ಮೋದಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.