ADVERTISEMENT

ಎಟಿಜಿಎಂ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ಪಿಟಿಐ
Published 4 ಆಗಸ್ಟ್ 2022, 20:45 IST
Last Updated 4 ಆಗಸ್ಟ್ 2022, 20:45 IST
   

ನವದೆಹಲಿ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಯುದ್ಧ ಟ್ಯಾಂಕ್‌ಗಳನ್ನು ನಾಶಗೊಳಿಸುವಂತಹ ನಿಖರ ಗುರಿಯಲೇಸರ್‌ ನಿರ್ದೇಶಿತ ಕ್ಷಿಪಣಿಗಳ (ಎಟಿಜಿಎಂ) ಪರೀಕ್ಷೆ ಗುರುವಾರ ಯಶಸ್ವಿಯಾಗಿ ನಡೆದಿದೆ.

ಮಹಾರಾಷ್ಟ್ರದ ಅಹ್ಮದ್‌ನಗರದ ಕೆ.ಕೆ.ರೇಂಜ್‌ನಲ್ಲಿ ಪ್ರಮುಖ ಯುದ್ಧ ಟ್ಯಾಂಕ್‌ ಅರ್ಜುನ್‌ನಿಂದ (ಎಂಬಿಟಿ) ಪರೀಕ್ಷಾರ್ಥವಾಗಿ ಉಡಾಯಿಸಿದ ಕ್ಷಿಪಣಿಗಳು ಎರಡು ಪ್ರತ್ಯೇಕ ಸ್ಥಳಗಳಲ್ಲಿನ ಗುರಿಗಳನ್ನು ಏಕಕಾಲಕ್ಕೆ ನಿಖರವಾಗಿ ಭೇದಿಸಿದವು ಎಂದು ರಕ್ಷಣಾ ಸಚಿವಾಲಯ ಹೇಳಿದೆ.

ಈ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಿದ ಡಿಆರ್‌ಡಿಒ ಹಾಗೂ ಪರೀಕ್ಷಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ಕೈಗೊಂಡ ಭಾರತೀಯ ಸೇನೆಯನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅಭಿನಂದಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.