ಪ್ರಾತಿನಿಧಿಕ ಚಿತ್ರ
ನವದೆಹಲಿ: ಜಲಾಂತರ್ಗಾಮಿ ನೌಕೆಗಳ ಮೇಲೆ ದಾಳಿ ನಡೆಸುವ ಕ್ಷಿಪಣಿಗಳನ್ನು ಬಹು ದೂರದಿಂದಲೇ ಹೊಡೆದುರುಳಿಸಬಲ್ಲ ಸಾಮರ್ಥ್ಯ ಹೊಂದಿರುವ ರಾಕೆಟ್‌ಗಳನ್ನು (ಇಆರ್‌ಎಎಸ್‌ಆರ್) ಭಾರತ ಅಭಿವೃದ್ಧಿಪಡಿಸಿದ್ದು, ಇದರ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿ ನಡೆಯಿತು.
‘ಐಎನ್‌ಎಸ್ ಕವರತ್ತಿ’ ಯುದ್ಧನೌಕೆಯಿಂದ ಈ ರಾಕೆಟ್‌ಗಳ ಪ್ರಾಯೋಗಿಕ ಪರೀಕ್ಷೆ ನಡೆಸಲಾಯಿತು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಸಿಬ್ಬಂದಿ, ಸೇನಾ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ. ‘ಇಆರ್‌ಎಎಸ್‌ಆರ್’ ಭಾರತದ ನೌಕಾ ಪಡೆಯ ಶಸ್ತ್ರಾಸ್ತ್ರ ಬಲವನ್ನು ಮತ್ತಷ್ಟು ಹೆಚ್ಚಿಸಿದೆ’ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.