ADVERTISEMENT

ಕೇಜ್ರಿವಾಲ್ ಬಂಧನ ಕುರಿತು ಹೇಳಿಕೆ: ಅಮೆರಿಕ ರಾಯಭಾರಿಗೆ ಭಾರತ ಸಮನ್ಸ್

ಪಿಟಿಐ
Published 27 ಮಾರ್ಚ್ 2024, 9:01 IST
Last Updated 27 ಮಾರ್ಚ್ 2024, 9:01 IST
ಭಾರತ ಮತ್ತು ಅಮೆರಿಕ ರಾಷ್ಟ್ರಧ್ವಜ 
ಭಾರತ ಮತ್ತು ಅಮೆರಿಕ ರಾಷ್ಟ್ರಧ್ವಜ     

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಕುರಿತು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ನೀಡಿದ ಹೇಳಿಕೆಯನ್ನು ವಿರೋಧಿಸಿ ಅಮೆರಿಕದ ಹಿರಿಯ ರಾಯಭಾರಿಗೆ ಭಾರತ ಸಮನ್ಸ್ ನೀಡಿದೆ. ಅಲ್ಲದೆ ತೀವ್ರ ಪ್ರತಿಭಟನೆಯನ್ನೂ ದಾಖಲಿಸಿದೆ.

ದೆಹಲಿಯ ದಕ್ಷಿಣ ಬ್ಲಾಕ್‌ನಲ್ಲಿರುವ ಕಾರ್ಯನಿರ್ವಾಹಕ ಉಪ ಮುಖ್ಯಸ್ಥರ ಗ್ಲೊರಿಯಾ ಬರ್ಬೆನಾ ಅವರಿಗೆ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಸುಮಾರು 30 ನಿಮಿಷಗಳ ಮಾತುಕತೆ ನಡೆದಿದೆ.

ಕೇಜ್ರಿವಾಲ್ ಅವರ ಕಾನೂನು ಪ್ರಕ್ರಿಯೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಅಮೆರಿಕ ಹೇಳಿತ್ತು.

ADVERTISEMENT

ದೆಹಲಿ ಅಬಕಾರಿ ನೀತಿ ಹಗರಣದ ಸಂಬಂಧ ನಡೆದಿದೆ ಎನ್ನಲಾಗದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.