ADVERTISEMENT

ಮಾರ್ಚ್ 27ರಿಂದ ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರ ಪುನರಾರಂಭ: ಕೇಂದ್ರ

ಪಿಟಿಐ
Published 8 ಮಾರ್ಚ್ 2022, 12:35 IST
Last Updated 8 ಮಾರ್ಚ್ 2022, 12:35 IST
ಸಾಂದರ್ಭಿಕ ಚಿತ್ರ – ಪಿಟಿಐ
ಸಾಂದರ್ಭಿಕ ಚಿತ್ರ – ಪಿಟಿಐ   

ನವದೆಹಲಿ: ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರ ಇದೇ 27ರಿಂದ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.

ಕೋವಿಡ್–19 ಸಾಂಕ್ರಾಮಿಕದಿಂದಾಗಿ 2 ವರ್ಷಗಳ ಹಿಂದೆ ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರ ಮಾರ್ಚ್ 27ರಿಂದ ಪುನರಾರಂಭಗೊಳ್ಳಲಿದೆ. ಆರೋಗ್ಯ ಸಚಿವಾಲಯದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.