ADVERTISEMENT

ಕೋವಿಡ್ ಲಸಿಕೆ ಅಡ್ಡಪರಿಣಾಮಗಳನ್ನು ಪರಿಶೀಲಿಸಲಿದೆ ಭಾರತ

ರಾಯಿಟರ್ಸ್
Published 9 ಏಪ್ರಿಲ್ 2021, 2:47 IST
Last Updated 9 ಏಪ್ರಿಲ್ 2021, 2:47 IST
ಸಾಂದರ್ಭಿಕ ಚಿತ್ರ (ಪಿಟಿಐ)
ಸಾಂದರ್ಭಿಕ ಚಿತ್ರ (ಪಿಟಿಐ)   

ನವದೆಹಲಿ: ಕೋವಿಡ್–19 ವಿರುದ್ಧದ ಲಸಿಕೆಗಳ ಅಡ್ಡಪರಿಣಾಮಗಳನ್ನು ಭಾರತದ ತಜ್ಞರ ತಂಡ ಪರಿಶೀಲನೆ ನಡೆಸಲಿದೆ.

ದೇಶದಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವಿಕೆ, ಸಣ್ಣ ಪ್ರಮಾಣದ ಅಡ್ಡಪರಿಣಾಮಗಳು ಕಾಣಿಸಿಕೊಂಡಿವೆಯೇ ಎಂಬುದನ್ನು ತಂಡ ಪರಿಶೀಲಿಸಲಿದೆ ಎಂದು ‘ಫೈನಾನ್ಶಿಯಲ್ ಡೈಲಿ ಮಿಂಟ್’ ವರದಿ ಮಾಡಿದೆ.

ಭಾರತದಲ್ಲಿ ಸದ್ಯ ಆಸ್ಟ್ರಾಜೆನೆಕಾ ಮತ್ತು ಭಾರತ್‌ ಬಯೋಟೆಕ್‌ ಅಭಿವೃದ್ಧಿಪಡಿಸಿರುವ ಲಸಿಕೆಗಳನ್ನು ನೀಡಲಾಗುತ್ತಿದೆ.

ADVERTISEMENT

ಯುರೋಪ್‌ನ ಹಲವು ರಾಷ್ಟ್ರಗಳು ಆಸ್ಟ್ರಾಜೆನೆಕಾದ ಲಸಿಕೆಯನ್ನು ಯುವಕರಿಗೆ ನೀಡುವುದಕ್ಕೆ ನಿರ್ಬಂಧ ವಿಧಿಸಿವೆ. ರಕ್ತಹೆಪ್ಪುಗಟ್ಟುವಿಕೆಯ ಅತಿ ವಿರಳ ಪ್ರಕರಣಗಳು ಕಾಣಿಸಿಕೊಂಡ ಬಳಿಕ ಆ ದೇಶಗಳು ನಿರ್ಬಂಧ ವಿಧಿಸಿವೆ. ಲಸಿಕೆ ಪಡೆದುಕೊಂಡ ಎರಡು ವಾರಗಳ ಬಳಿಕ 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ಕೆಲವೇ ಕೆಲವು ಮಹಿಳೆಯರಲ್ಲಿ ಅಡ್ಡಪರಿಣಾಮ ಉಂಟಾಗಿತ್ತು.

ಈ ಮಧ್ಯೆ,ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ಮುಖ್ಯಮಂತ್ರಿಗಳ ಜತೆ ಗುರುವಾರ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ,ಏಪ್ರಿಲ್‌ 11ರಿಂದ 14ರ ವರೆಗೂ 'ಲಸಿಕೆ ಉತ್ಸವ' ನಡೆಸುವಂತೆಕರೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.