ನವದೆಹಲಿ: ಇಟಲಿಯಲ್ಲಿ ಮಂಗಳವಾರ ನಡೆಯಲಿರುವ ಜಿ–20 ಶೃಂಗಸಭೆಯಲ್ಲಿ ಭಾರತದ ವ್ಯಾಣಿಜ್ಯ ಸಚಿವ ಪೀಯೂಷ್ ಗೋಯಲ್ ಚೀನಾದ ತಮ್ಮ ಸಹವರ್ತಿಯನ್ನು ಭೇಟಿಯಾಗಲಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.
ಅಮೆರಿಕ, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಬ್ರೆಜಿಲ್ ಮತ್ತು ಕೆನಡಾ ದೇಶಗಳ ವ್ಯಾಣಿಜ್ಯ ಸಚಿವರುಗಳನ್ನೂ ಗೋಯಲ್ ಇದೇ ವೇಳೆ ಭೇಟಿ ಮಾಡಲಿದ್ದಾರೆ ಎಂದು ಹೇಳಿಕೆಯು ಸೋಮವಾರ ತಿಳಿಸಿದೆ.
ಗಡಿ ಸಂಬಂಧಿತ ಸಮಸ್ಯೆಗಳಿಂದಾಗಿ ಭಾರತ ಮತ್ತು ಚೀನಾ ನಡುವಿನ ಸಂಬಂಧ ಹದಗೆಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.