ನವದೆಹಲಿ: 24 ಗಂಟೆಗಳಲ್ಲಿ ದೇಶದಾದ್ಯಂತ 2,81,386 ಹೊಸ ಪ್ರಕರಣಗಳು ದಾಖಲಾಗಿದ್ದು, 4,106 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. ಆ ಮೂಲಕ ಕಳೆದ ವಾರದಿಂದ ಬೆಳಕಿಗೆ ಬರುತ್ತಿರುವ ಹೊಸ ಪ್ರಕರಣಗಳ ಸಂಖ್ಯೆಯ ಪ್ರಮಾಣದಲ್ಲಿ ಹಂತಹಂತವಾಗಿ ಇಳಿಕೆ ಕಂಡುಬಂದಿದೆ.
ಈ ವರೆಗೆ ದೇಶದಲ್ಲಿ ದಾಖಲಾದ ಕೋವಿಡ್ ಪ್ರಕರಣಗಳ ಸಂಖ್ಯೆ 2,49,65,463ಕ್ಕೆ ತಲುಪಿದ್ದು, 2,11,74,076 ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕೊರೊನಾ ಸೋಂಕಿನಿಂದಾಗಿ ಇಲ್ಲಿಯವರೆಗೆ 2,74,390 ಮಂದಿ ಪ್ರಾಣ ಕಳೆದುಕೊಂಡಿದ್ದು, 35,16,997 ಸಕ್ರಿಯ ಪ್ರಕರಣಗಳಿವೆ. 18,29,26,460 ಕೋವಿಡ್ ಲಸಿಕೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.