ನವದೆಹಲಿ: ಅಂತರರಾಷ್ಟ್ರೀಯ ಸಮುದ್ರ ಗಡಿ ರೇಖೆ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ ಬಾಂಗ್ಲಾದೇಶ ವಶಕ್ಕೆ ಪಡೆದಿರುವ 34 ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವಂತೆ ಭಾರತ ಒತ್ತಾಯಿಸಿದೆ.
ಜುಲೈ 14 ಮತ್ತು 15ರಂದು ಬಾಂಗ್ಲಾದೇಶವು ಒಟ್ಟು 34 ಭಾರತೀಯ ಮೀನುಗಾರರನ್ನು ಮತ್ತು ಅವರಿಗೆ ಸೇರಿದ ಎರಡು ದೋಣಿಗಳನ್ನು ವಶಕ್ಕೆ ಪಡೆದಿದೆ. ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿ, ಈ ವಿಷಯವನ್ನು ಅಲ್ಲಿನ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಮೀನುಗಾರರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.